ಐಪಿಎಲ್ ಮೆಗಾ ಹರಾಜು: ಆರ್ ಸಿಬಿಗೆ ಮರಳಿದ ಹರ್ಷಲ್ ಪಟೇಲ್: ಭರ್ಜರಿ ಮೊತ್ತಕ್ಕೆ ಸೇಲಾದ ಶ್ರೇಯಸ್ ಅಯ್ಯರ್. ಬೆಂಗಳೂರು,ಫೆಬ್ರವರಿ,12,2022(..):ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯುತ್ತಿದ್ದು ಒಟ್ಟು 10 ತಂಡಗಳು ಬಿಡ್ಡಿಂಗ್ ನಲ್ಲಿ ಪಾಲ್ಗೊಂಡಿವೆ. ಈ ಮಧ್ಯೆ ಹರ್ಷಲ್ ಪಟೇಲ್ ಭರ್ಜರಿ ಮೊತ್ತ ಪಡೆದು ಆರ್ ಸಿಬಿ ತಂಡಕ್ಕೆ ವಾಪಸ್ ಆಗಿದ್ದಾರೆ. ಕಳೆದ ಸೀಸನ್​ನಲ್ಲಿ 32 ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ ಖರೀದಿಗಾಗಿ ಭರ್ಜರಿ ಪೈಪೋಟಿ ಕಂಡು ಬಂತು. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಹರ್ಷಲ್ ಪಟೇಲ್ ಖರೀದಿಗಾಗಿ ಸನ್​ರೈಸರ್ಸ್​ ಹೈದರಾಬಾದ್​ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ 10.75 ಕೋಟಿ ನೀಡಿ ಆರ್​ಸಿಬಿ ತಂಡ ಖರೀದಿಸಿತು. ಇದಕ್ಕೂ ಮುನ್ನ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ. ನೀಡಿ ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಐದು ಆಟಗಾರರು ಇದ್ದಾರೆ. ಈ ಹಿಂದೆ ಆರ್​ಸಿಬಿ ತಂಡವು ರಿಟೈನ್ ಆಯ್ಕೆಯ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದೆ. ಇದೀಗ ಹರ್ಷಲ್ ಪಟೇಲ್ ಹಾಗೂ ಫಾಫ್ ಡುಪ್ಲೆಸಿಸ್ ಕೂಡ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇನ್ನು ಶ್ರೇಯಸ್ ಅಯ್ಯರ್ 12.25 ಕೋಟಿ ರೂ.ಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಖರೀದಿಯಾಗಿದ್ದಾರೆ. ಮೊದಲಸುತ್ತಿನಲ್ಲಿಹರಾಜಾದಆಟಗಾರರು: ಶಿಖರ್ ಧವನ್- 8.25 ಕೋಟಿ (ಪಂಜಾಬ್ ಕಿಂಗ್ಸ್) ರವಿಚಂದ್ರನ್ ಅಶ್ವಿನ್- 5 ಕೋಟಿ ( ರಾಜಸ್ಥಾನ್ ರಾಯಲ್ಸ್) ಪ್ಯಾಟ್ ಕಮಿನ್ಸ್- 7.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್​) ಕಗಿಸೋ ರಬಾಡ- 9.25 ಕೋಟಿ (ಪಂಜಾಬ್ ಕಿಂಗ್ಸ್​) ಟ್ರೆಂಟ್ ಬೌಲ್ಟ್- 8 ಕೋಟಿ (ರಾಜಸ್ಥಾನ್ ರಾಯಲ್ಸ್​) ಶ್ರೇಯಸ್ ಅಯ್ಯರ್- 12.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್​) ಮೊಹಮ್ಮದ್ ಶಮಿ- 6.25 ಕೋಟಿ (ಗುಜರಾತ್ ಟೈಟನ್ಸ್​) ಫಾಫ್ ಡುಪ್ಲೆಸಿಸ್- 7 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ಕ್ವಿಂಟನ್ ಡಿಕಾಕ್- 6.75 ಕೋಟಿ (ಲಕ್ನೋ ಸೂಪರ್ ಜೈಂಟ್ಸ್​) ಡೇವಿಡ್ ವಾರ್ನರ್- 6.25 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್​) ಇನ್ನು ಡ್ವೇನ್ ಬ್ರಾವೋ ರಾಬಿನ್ ಉತ್ತಪ್ಪ ಅವರನ್ನ ಸಿಎಸ್ ಕೆ ತಂಡ ಮತ್ತೆ ಖರೀದಿಸಿದೆ. : - -