ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ- ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ. ಬೆಂಗಳೂರು,ಫೆಬ್ರವರಿ,8,2022(..):ರಾಜ್ಯದಲ್ಲಿ ಕೇಸರಿ ಶಾಲು ಹಿಜಾಬ್ ವಿವಾದದ ಕಿಚ್ಚು ಹೆಚ್ಚಾಗಿದ್ದು ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಈ ಮಧ್ಯೆ ಬಾಗಲಕೋಟೆ, ಶಿವಮೊಗ್ಗದ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನವಾಗಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಮಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಲಾ-ಕಾಲೇಜುಗಳು ರಾಷ್ಟ್ರದ ಭಾವೈಕತೆಯ ಕೇಂದ್ರ ಬಿಂದು. ವಿದ್ಯಾರ್ಥಿಗಳ ಸಾಮಾಜಿಕ ಸ್ವಾಸ್ಥ ಕೆಡಿಸುವ ಅಸ್ತ್ರಗಳಾಗಬಾರದು. ಪೋಷಕರು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ. : -- -