ಎಲ್ಲಾ ಇಲಾಖೆಗಳಲ್ಲೂ ‘ನಗದು ಘೋಷಣೆ ವಹಿ’ ನಿರ್ವಹಿಸುವಂತೆ ರಾಜ್ಯ ಸರ್ಕಾರದಿಂದ ಸುತ್ತೋಲೆ. ಬೆಂಗಳೂರು,ಫೇಬ್ರವರಿ,7,2022(..):ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು,ಮಂಡಳಿಗಳು, ನಿಗಮ ಇತ್ಯಾದಿ ಕಚೇರಿಗಳಲ್ಲಿ ಪಾರದರ್ಶಕತೆಯನ್ನು ತರಲು ಸರ್ಕಾರ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಲ್ಲಿ ನಗದು ಘೋಷಣೆ ವಹಿಯನ್ನು ನಿರ್ವಹಿಸುವಂತೆ ಸೂಚನೆ ನೀಡಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯವು ರಿಟ್ ಪಿಟಿಷನ್ ಸಂಖ್ಯೆ: 79/2021(-) ರಲ್ಲಿ ದಿನಾಂಕ 10.11.2021 ರಂದು ನೀಡಿರುವ ನಿರ್ದೇಶನದನ್ವಯ, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು/ ಮಂಡಳಿಗಳು/ ನಿಗಮಗಳು ಈ ಕೆಳಗಿನ ಕಾರ್ಯ ವಿಧಾನವನ್ನು ಅನುಸರಿಸಿ, ಈ ಸುತ್ತೋಲೆಗೆ ಲಗತ್ತಿಸಲಾದ ನಿಗದಿತ ನಮೂನೆಯಲ್ಲಿ “ನಗದು ಘೋಷಣೆ ವಹಿಯನ್ನು ನಿರ್ವಹಣೆ ಮಾಡುವಂತೆ ನಿರ್ದೇಶಿಸಲಾಗಿದೆ. “ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು/ಮಂಡಳಿಗಳು/ನಿಗಮ ಇತ್ಯಾದಿ ಕಚೇರಿಗಳಲ್ಲಿ ಪಾರದರ್ಶಕತೆಯನ್ನು ತರಲು, ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಗಿನ ಸೂಚನೆಗಳನ್ನು ಪಾಲಿಸಬೇಕು. ಮೇಲಿನ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಇವುಗಳ ಪಾಲನೆಯಲ್ಲಿ ಯಾವುದೇ ಲೋಪವುಂಟಾದರೇ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಸಿಎಸ್ ರವಿ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ. : - – .