ಮೇಲ್ಮನವಿ ಅರ್ಜಿ ವಜಾ: ಸುಪ್ರೀಂಕೋರ್ಟ್ ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹಿನ್ನಡೆ. ನವದೆಹಲಿ,ಫೆಬ್ರವರಿ,7,2022(..):ದಾರವಾಢ ಜಿ.ಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ಧ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ನಡುವೆ ಸಿಬಿಐ ತನಿಖೆ ಆದೇಶ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ‍ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ವಿನಯ್ ಕುಲಕರ್ಣಿ ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸುಪ್ರೀಂಕೋರ್ಟ್ ನಲ್ಲೂ ವಿನಯ್ ಕುಲಕರ್ಣಿಗೆ ಹಿನ್ನಡೆಯಾಗಿದ್ದು ಸಿಬಿಐ ತನಿಖೆ ಸಂಕಷ್ಟ ಎದುರಾಗಿದೆ. : - -