ಪಂಚ ರಾಜ್ಯಗಳ ಚುನಾವಣೆ: ಸಮಾವೇಶ ನಡೆಸಲು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ಬೆಂಗಳೂರು, ಫೆಬ್ರವರಿ 06,2022 (..):ಪಂಚ ರಾಜ್ಯಗಳ ಚುನಾವಣೆಯಲ್ಲಿ ಸಮಾವೇಶ ನಡೆಸಲು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ. ಹೌದು. ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳಲ್ಲಿ ಚುನಾವಣಾ ಸಮಾವೇಶ ನಡೆಸಲು ಹೇರಿದ್ದ ನಿರ್ಬಂಧ ತೆರವುಗೊಳಿಸಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸಮಾವೇಶ ನಡೆಸಲು ನಿರ್ಬಂಧ ಹೇರಲಾಗಿತ್ತು. ಇದೀಗ ಭಾನುವಾರ ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಹೀಗಾಗಿ ಇನ್ನು ಮುಂದೆ ಪಂಚ ರಾಜ್ಯಗಳಲ್ಲಿ ಚುನಾವಣೆ ಭರಾಟೆ ಮತ್ತಷ್ಟು ಜೋರಾಗಲಿದೆ.