ಸೀಟರ್ ಪ್ರೋಟೋಟೈಪ್ ಬಸ್ ಪರಿವೀಕ್ಷಣೆ: ಸಾರಿಗೆ ಸಚಿವರಿಂದ ಮೆಚ್ಚುಗೆ ಬೆಂಗಳೂರು,ಜುಲೈ,6,2024 (..):ಹೊಸ 9600 ಸೀಟರ್ ಪ್ರೋಟೋಟೈಪ್ ಬಸ್ಸನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಕೆ ಎಸ್ ಆರ್ ಟಿ ಸಿ ಕೇಂದ್ರ‌ ಕಛೇರಿಯಲ್ಲಿ ಪರಿವೀಕ್ಷಣೆ ನಡೆಸಿದರು. ಸೀಟರ್ ಪ್ರೋಟೋಟೈಪ್ ಬಸ್ ವೀಕ್ಷಿಸಿ ಬಹುಮೆಚ್ಚುಗೆ ಸೂಚಿಸಿದ ಸಚಿವ ರಾಮಲಿಂಗರೆಡ್ಡಿ, ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು‌ ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು. ಈ ಬಸ್ಸಿನ ವಿಶೇಷತೆಗಳೇನು..? ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ ಲೈಟ್‌ ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ () ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ. ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ. ಒಟ್ಟಾರೆ ಬಸ್ಸಿನ ಉದ್ದದಲ್ಲಿ 3.5% ಹೆಚ್ಚಳ ಇರುವುದರಿಂದ ಸಲೂನ್‌ ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ. ಒಟ್ಟಾರೆ ಬಸ್ಸಿನ ಎತ್ತರದಲ್ಲಿ 5.6% ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್‌ ರೂಂ ಇರುತ್ತದೆ. ವಿಂಡ್‌ ಶೀಲ್ಡ್ ಗಾಜು 9.5% ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ. ವಿಶಾಲ ಲಗೇಜ್ ಸ್ಥಳಾವಕಾಶವಿದ್ದು ಶೇ 20% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿರುತ್ತದೆ. + ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ. ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ. ಉನ್ನತ ದರ್ಜೆ/ ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ. ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸದಿಂದ ವಾಹನದ ನಿರ್ವಹಣೆ ಕೈಗೊಳ್ಳಲು ಸುಲಭವಾಗಿರುತ್ತದೆ. ಹಿಂಭಾಗದಲ್ಲಿ ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ. ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ ಗಳನ್ನು ಹೊಂದಿದ್ದು ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ. ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ () ಅಳವಡಿಸಿದ್ದು ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು 30 ನಾಜ಼ಲ್ ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರು ಸಿಂಪಡಿಸಲು ಪ್ರಾರಂಭವಾಗುತ್ತದೆ. ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ. : , , ,