ಕುತೂಹಲ ಮೂಡಿಸಿದ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಭೇಟಿ ಬೆಂಗಳೂರು,ಸೆಪ್ಟಂಬರ್,30,2024 (..):ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಆದೇಶಿಸಿದ್ದು ಎಫ್ ಐಆರ್ ಕೂಡ ದಾಖಲಾಗಿದೆ. ಈ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರಸ್ 136 ಶಾಸಕರೂ ಒಟ್ಟಾಗಿದ್ದೇವೆ. ಸಭೆಯಲ್ಲಿ ರಾಝಕೀಯ ಚರ್ಚೆ ಮಾಡಿಲ್ಲ ಎಂದಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಡಿಕೆಶಿ ಅವರು, ಪ್ರಧಾನಿ ಮೋದಿ ಒಳ್ಳೆಯ ಸಚಿವ ಸ್ಥಾನ ನೀಡಿದ್ದಾರೆ. ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾಗುತ್ತೆ ಹೆಚ್ ಡಿ ಕುಮಾರಸ್ವಾಮಿ ಅವರಿಂದ ರಾಜ್ಯಕ್ಕೆ ಒಳ್ಳೆಯ ಕೆಲಸಗಳಾಗಬೇಕು. ರಾಜ್ಯಕ್ಕೆ ದೊಡ್ಡ ಕೈಗಾರಿಕೆಗಳನ್ನ ಕೊಡಿಸಬೇಕು. ಮಂಡ್ಯ, ಮೈಸೂರು, ಬೀದರ್ ಸೇರಿ ಹಲವೆಡೆ ಕೈಗಾರಿಕೆ ಸ್ಥಾಪಿಸಲಿ ಎಂದರು. : , , , ,