ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಒನ್ ಕ್ಲಾಸ್, ಒನ್ ಟಿವಿ ಚಾನಲ್’ ಘೋಷಣೆ. ನವದೆಹಲಿ ,ಫೆಬ್ರವರಿ,1,2022(..):ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು ವಿದ್ಯಾರ್ಥಿಗಳಿಗಾಗಿ ಕೇಂದ್ರ ಬಜೆಟ್ ನಲ್ಲಿ ‘ಒನ್ ಕ್ಲಾಸ್, ಒನ್ ಟಿವಿ ಚಾನಲ್’ ಘೋಷಣೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಕೊವೀಡ್ ಮಹಾಮಾರಿ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಭಾರಿ ಪರಿಣಾಮ ಬೀರಿದೆ ಹಿಗಾಗಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದುವರೆಗೆ ಕಡಿಮೆ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿದ್ದಂತ ಒನ್ ಕ್ಲಾಸ್, ಒನ್ ಟಿವಿ ಚಾನಲ್ ಸಾಮರ್ಥ್ಯವನ್ನು ಹೆಚ್ಚಳ ಮಾಡಲಾಗಿದೆ. ಈ ಚಾನಲ್ ಗಳನ್ನು 200ಕ್ಕೆ ಹೆಚ್ಚಿಸುತ್ತಿರೋದಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಹಳ್ಳಿ ಶಾಲೆಗಳ ಮಕ್ಕಳ ವಿದ್ಯಾಭ್ಯಾಸದ ದೃಷ್ಠಿಯಿಂದ ಒನ್ ಕ್ಲಾಸ್, ಒನ್ ಟಿವಿ ಚಾನಲ್ ಆರಂಭಿಸಲಾಗಿದೆ. ಕೊರೋನಾ ಕಾರಣ ಮಕ್ಕಳು ಮನೆಯಲ್ಲಿಯೇ ಉಳಿದಿದ್ದಾರೆ. ಈ ಮಕ್ಕಳ ವಿದ್ಯಾಭ್ಯಾಸದ ದೃಷ್ಠಿಯಿಂದ ಚಾನಲ್ ಗಳ ಸಂಖ್ಯೆನ್ನು ಪ್ರಧಾನ ಮಂತ್ರಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200ಕ್ಕೆ ಹೆಚ್ಚಳ ಮಾಡಲಾಗುತ್ತಿದೆ. ಇದು ದೇಶದ 1 ರಿಂದ 12ನೇ ತರಗತಿ ಮಕ್ಕಳಿಗೆ ಟಿವಿ ಚಾನಲ್ ಗಳ ಮೂಲಕ ವಿದ್ಯಾಬ್ಯಾಸದ ಕಲಿಕೆಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. : - , - … : ‘ , ’ , 1, 2022 (..): ‘ , ,’ . 2022-23 . , -19 ’ . ‘ , ’ 200. , . “ . 200 ’ - . 1st 12th ,” .: / / / /