ಟೋಯಿಂಗ್ ನಿಯಮ ಬದಲಾವಣೆ ಸಂಬಂಧ ಇಂದು ಅಧಿಕಾರಿಗಳ ಜತೆ ಸಭೆ- ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು,ಜನವರಿ,31,2022(..): ವಾಹನ ಟೋಯಿಂಗ್ ನಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಟೋಯಿಂಗ್ ನಿಯಮ ಬದಲಾವಣೆ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಟೋಯಿಂಗ್ ನಿಯಮ ಬದಲಾವಣೆ ಸಂಬಂಧ ಪೊಲೀಸ್ ಅಧಿಕಾರಿಗಳ ಜತೆ ಇಂದು ಸಭೆ ನಡೆಸಿ ಚರ್ಚಿಸುತ್ತೇನೆ. ಸಾರ್ವಜನಿಕಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. : -