ಸಂಸತ್ ಜಂಟಿ ಅಧಿವೇಶನ: ಕೇಂದ್ರ ಸರ್ಕಾರದ ಜನಪರ ಕಾರ್ಯಗಳ ಬಗ್ಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಶ್ಲಾಘನೆ. ನವದೆಹಲಿ,ಜನವರಿ,31,2022(..):ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಮನಾಥ್ ಕೋವಿಂದ್ ಕೇಂದ್ರ ಸರ್ಕಾರದ ಕಾರ್ಯಗಳ ಬಗ್ಗೆ ಶ್ಲಾಘಿಸಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಮನಾಥ್ ಕೋವಿಂದ್, ಕೊರೋನಾ 3ನೇ ಅಲೆ ತಡೆಯಲು ಸರ್ಕಾರ ನಿರಂತರ ಹೋರಾಟ ನಡೆಸುತ್ತಿದೆ. ಲಸಿಕಾ ಅಭಿಯಾನವನ್ನ ಯಶಸ್ವಿಯಾಗಿ ನಿರ್ವಹಣೆ ಮಾಡುತ್ತಿದೆ. ಔಷಧ ವಲಯದಲ್ಲಿ ದೇಶದಲ್ಲಿ ಹೆಚ್ಚು ಸಾಧನೆ ಮಾಡಲಾಗುತ್ತಿದೆ. 8 ಲಸಿಕೆಗಳ ಬಳಕ್ಕೆ ಅನುಮತಿ ನೀಡಲಾಗಿದೆ ಜನರ ಆರೋಗ್ಯ ಸುಧಾರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಆಯುಷ್ಮಾನ್ ಯೋಜನೆಯಡಿ ಬಡವರಿಗೆ ಉಚಿತ ಚಿಕಿತ್ಸೆ. ಲಸಿಕಾ ಅಭಿಯಾನದಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದಕ್ಕಿ 150 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಶೇ.90 ರಷ್ಟು ಜನರಿಗೆ ಒಂದು ಡೋಸ್ ಶೇ.75ರಷ್ಟು ಜನರಿಗೆ 2ನೇ ಡೋಸ್ ನೀಡಲಾಗಿದೆ. ಸರ್ಕಾರದ ಕ್ರಮಗಳಿಂದಾಗಿ ಜನರಿಗೆ ಆರೋಗ್ಯದ ಸೌಲಭ್ಯಗಳು ಸಿಗುತ್ತಿದೆ. ರಫ್ತು ಉತ್ತೇಜನಕ್ಕೆ ಸರ್ಕಾರ ಒತ್ತು ನೀಡಿದೆ ಕೃಷಿ ಉತ್ಪನ್ನ ದಾಖಲೆ ಪ್ರಮಾಣದಲ್ಲಿ ರಫ್ತಾಗುತ್ತಿದೆ. ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಬದಲಾವಣೆಯಾಗುಯತ್ತಿದ್ದು, ಯುವಕರ ಕೌಶಲ್ಯ ವೃದ್ಧಿಗೆ ಅನುಕೂಲವಾಗಿದೆ ಎಂದು ರಾಷ್ಟ್ರಪತಿ ರಮನಾಥ್ ಕೋವಿಂದ್ ತಿಳಿಸಿದರು. : –- - …. : .’ - , 31, 2022 (..): . , ’ - .“ 3rd . . ’ , . . . ,” .: / . / /