ಉಸ್ತುವಾರಿ ಸಚಿವರ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ- ಅಸಮಾಧಾನಿತರಿಗೆ ಸಿಎಂ ಬೊಮ್ಮಾಯಿ ಸಂದೇಶ. ಬೆಂಗಳೂರು,ಜನವರಿ,25,2022(..):28 ಸಚಿವರ ಜಿಲ್ಲಾ ಉಸ್ತುವಾರಿ ಬದಲಾವಣೆ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ ಬೆನ್ನಲ್ಲೆ ಸಚಿವ ಎಂಟಿಬಿ ನಾಗರಾಜ್ ಸೇರಿ ಕೆಲ ಸಚಿವರು ತಮ್ಮ ಸ್ವಂತ ಜಿಲ್ಲೆ ಸಿಗದೆ ಇರುವುದಕ್ಕೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಅಸಮಾಧಾನಿತ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸಂದೇಶ ರವಾನಿಸಿದ್ದಾರೆ. ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ ಅನಿವಾರ್ಯವಾಗಿ ಚುನಾವಣಾ ವರ್ಷ ಅನ್ನೋ ಕಾರಣಕ್ಕೆ ಈ ಬದಲಾವಣೆ ಮಾಡಲಾಗಿದೆ. ಈಗಿನ ಪಟ್ಟಿಯಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಬಗ್ಗೆ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಎಲ್ಲರ ಜತೆ ಸುದೀರ್ಘವಾಗಿ ಚರ್ಚಿಸಿದ್ದೇವೆ. ಯಾರೂ ಸಹ ಅಸಮಾಧಾನ ವ್ಯಕ್ತಪಡಿಸಿಲ್ಲ. ಇನ್ನು ಯಾರೂ ಸಹ ಬಿಜೆಪಿ ಬಿಟ್ಟು ಹೋಗಲ್ಲ. ಕೆಲವೇ ದಿನಗಳಲ್ಲಿ ಕಾದು ನೋಡಿ ಬಿಜೆಪಿ ಶಕ್ತಿ ಏನು ಅಂತಾ ಗೊತ್ತಾಗುತ್ತದೆ ಎಂದು ಸಿದ್ಧರಾಮಯ್ಯಗೆ ಟಾಂಗ್ ನೀಡಿದರು. : – - - … - : , 25, 2022 (..): - 28 . , . , .“ - . , ,” . , - . , . . ,” .: / / / - /