ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯ ಶಿಕ್ಷಕನಿಂದ ಲೈಂಗಿಕ ಕಿರುಕುಳ. ಮೈಸೂರು,ಜನವರಿ,25,2022(..): ಶಾಲಾ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಹೆಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿರುವ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಗಳೇ ಈ ವಿಡಿಯೋ ರೆಕಾರ್ಡ್ ಮಾಡಿದ್ದು ಸದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಈ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಮುಖ್ಯ ಶಿಕ್ಷಕನ ವಿರುದ್ಧ ವಿಡಿಯೋ ಜೊತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದ್ದು, ಬಿಇಓ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ. : – – .