ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಟ್ವಿಟರ್ ಖಾತೆ ಹ್ಯಾಕ್ ಬೆಂಗಳೂರು, ಜನವರಿ 23, 2022 (..):ಇತ್ತೀಚಿಗೆ ಹ್ಯಾಕರ್ ಗಳ ಕಾಟ ಹೆಚ್ಚಾಗುತ್ತಿದ್ದು, ಸೈಬರ್ ಕ್ರೈಂ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ. ಹೌದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಟ್ವಿಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಾಂತ್ರಿಕ ತಜ್ಞರು ಈ ಕುರಿತು ಪರಿಶೀಲಿಸುತ್ತಿದ್ದು, ಎನ್‌ಡಿಆರ್‌ಎಫ್ ಖಾತೆಯನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟ್ಟರ್ ಖಾತೆಯನ್ನು ಕೆಲ ಅವಧಿ ವರೆಗೆ ಹ್ಯಾಕರ್ಸ್ ಹ್ಯಾಕ್ ಮಾಡಿದ್ದನ್ನು ಈ ವೇಳೆ ಸ್ಮರಿಸಬಹುದಾಗಿದೆ. :