ಚಿತ್ರ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು: ಮತ್ತಿಬ್ಬರು ಸಿಸಿಬಿ ಪೊಲೀಸರ ಬಲೆಗೆ ಬೆಂಗಳೂರು, ಜನವರಿ 23, 2022 (..):ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕನೊಬ್ಬರ ಹತ್ಯೆಗೆ ಸಂಚು ರೂಪಿಸಿದ್ದ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಇದೀಗ ಬೆಂಗಳೂರಿನ ಸುಂಕದ ಕಟ್ಟೆ ಬಳಿಯ ಚೈತ್ರಾ ಬಾರ್ ಬಳಿ ಬಂಧಿಸಲಾಗಿದೆ. ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರ ಶೋಧಕಾರ್ಯವನ್ನು ಪೊಲೀಸರು ಮಾಡುತ್ತಿದ್ದರು. : ,