ಕೊರೊನಾ ಪ್ರಕರಣ ಹೆಚ್ಚಾದರೆ ಮತ್ತೆ ಕಠಿಣ ನಿಯಮ ಜಾರಿ : ಸಚಿವ ಡಾ.ಕೆ. ಸುಧಾಕರ್ ಬೆಂಗಳೂರು, ಜನವರಿ 23, 2022 (..):ಕೊರೊನಾ ಪ್ರಕರಣಗಳು ಹೆಚ್ಚಾದರೆ ಮತ್ತೆ ಕಠಿಣ ನಿಯಮ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಜ್ಞಾನಿಕವಾಗಿ ಯೋಚನೆ ಮಾಡಿ ರಾಜ್ಯದಲ್ಲಿ ಕೋವಿಡ್ ಗೈಡ್ ಜಾರಿ ಮಾಡಿದ್ದೇವೆ. ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಾದರೆ ಮತ್ತೆ ಕಠಿಣ ನಿರ್ಬಂಧ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನವರು ಅವೈಜ್ಞಾನಿಕವಾಗಿ ರೂಲ್ಸ್ ಜಾರಿ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸರಕಾರ ಕೂಡ ಎಲ್ಲ ಆಯಾಮಗಳಿಂದ ಚರ್ಚಿಸಿ, ತಜ್ಞರ ವರದಿಯೊಂದಿಗೆ ನಿಯಮಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದ್ದಾರೆ. :