ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕೋವಿಡ್ ಸೋಂಕು ದೃಢ. ಬೆಂಗಳೂರು,ಜನವರಿ,22,2022(..):ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು , ಈ ನಡುವೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. : - - - .