ಕನ್ನಡ ಕಡ್ಡಾಯ ಆದೇಶ ಕೈಬಿಟ್ಟ ರಾಜ್ಯ ಸರಕಾರ..! ಬೆಂಗಳೂರು,ಜನವರಿ,22,2022(..):ಸ್ನಾತಕ ಪದವಿಗಳಲ್ಲಿ ಕನ್ನಡ ಭಾಷೆಯನ್ನ ಕಡ್ಡಾಯ ಆದೇಶವನ್ನ ರಾಜ್ಯ ಸರ್ಕಾರ ಕೈಬಿಟ್ಟಿದೆ. ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿತ್ತು. ಈ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ , ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಆದೇಶ ಕೈಬಿಟ್ಟು ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಅಧೀನ ಕಾರ್ಯದರ್ಶಿ(ಉನ್ನತ ಶಿಕ್ಷಣ ಇಲಾಖೆ) ಮಹೇಶ್ ಆರ್., ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನದಲ್ಲಿ ಸ್ನಾತಕ ಪದವಿಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿರುವ ಉಲ್ಲೇಖ(1) ಮತ್ತು (2) ರ ದಿನಾಂಕ: 07-08-2021 ಮತ್ತು 15-09-2021ರ ಆದೇಶಗಳನ್ನು ಪ್ರಶ್ನಿಸಿ, ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್ ಮತ್ತಿತರರು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ: 18156/2021 () ಅನ್ನು ದಾಖಲಿಸಿರುತ್ತಾರೆ. ಕರ್ನಾಟಕ ಉಚ್ಚ ನ್ಯಾಯಾಲಯವು ದಿನಾಂಕ: 16-12-2021ರಲ್ಲಿ ನೀಡಿರುವ ಮಧ್ಯಂತರ ಆದೇಶದನ್ವಯ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಯಲು ಇಚ್ಛಿಸದಿದ್ದರೆ, ಮಾನ್ಯ ನ್ಯಾಯಾಲಯದ ಅಂತಿಮ ಆದೇಶವಾಗುವವರೆಗೆ ಅದನ್ನು ಕಡ್ಡಾಯಗೊಳಿಸದಂತೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. : – – – . … . , 22, 2022 (..): - ., . , . “ . ’ ,” . . , ., ( ), , 2020.: / / ./