ಶೀಘ್ರದಲ್ಲೇ ರಾಜ್ಯದ ಜನರಿಗೆ ಹಾಲಿನ ದರ ಏರಿಕೆಯ ಶಾಕ್..? ಬೆಂಗಳೂರು,ಜನವರಿ,18,2022(..):ಕೊರೊನಾ ಸಂಕಷ್ಟದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಇದೀಗ ಹಾಲಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಲೀಟರ್ ಹಾಲಿನ ದರ 2 ರೂಪಾಯಿ ಏರಿಕೆ ಮಾಡಲು ಕೆಎಂಎಫ್‌ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಿದೆ. ಕರ್ನಾಟಕ ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡುವ ಸಂಬಂಧ ಪ್ರಸ್ತಾಪ ಮಾಡಲಾಗಿದ್ದು ಒಕ್ಕೂಟಗಳ ಜತೆ ಸಭೆಯ ಬಳಿಕ ಸಿಎಂ ಬೊಮ್ಮಾಯಿ ಜತೆ ಚರ್ಚಿಸುವುದಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ 3 ವರ್ಷಗಳಿಂದ ಹಾಲಿನ ದರ ನಿರಂತರವಾಗಿ ಏರಿಕೆಯಾಗುತ್ತಿದೆ. 2019ರಲ್ಲಿ 3 ಬಾರಿ ಹಾಲಿನ ದರ ಏರಿಕೆ ಮಾಡಲಾಗಿತ್ತು. ಮೊದಲು 2019ರ ಫೆಬ್ರವರಿಯಲ್ಲಿ ರೂ 1.50, ಆಗಸ್ಟ್‌ನಲ್ಲಿ ರೂ 1.50 ಏರಿಕೆ ಹಾಗೂ ನವೆಂಬರ್‌ನಲ್ಲಿ 3ನೇ ಬಾರಿಗೆ 1 ರೂಪಾಯಿ ಏರಿಕೆ ಮಾಡಲಾಗಿತ್ತು. ಬಳಿಕ 2020ರಲ್ಲಿ 1 ರೂಪಾಯಿ 50 ಪೈಸ್ ಏರಿಕೆ ಮಾಡಲಾಗಿತ್ತು. 2021ರ ಫೆಬ್ರವರಿಯಲ್ಲಿ ಹಾಲಿನ ದರ ರೂ.2 ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್‌ ಮುಂದಾಗಿದೆ. … : ?, 18, 2022 (..): -19 , , . () . 2 . . . , . . 2019. . 1.50 2019, . 1.50 . . 1 . . 1.50 2020 . 2 2021. .: / / : - - –-