ಕಾಲೇಜು ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ ಬೆಂಗಳೂರು,ಜುಲೈ,3,2024 (..):ಕಾಲೇಜು ವಿದ್ಯಾರ್ಥಿಯೇ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈ ಕಿಸಾನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್, ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ ಎಂಬಾತನೇ ಹತ್ಯೆಗೈದಿರುವುದು ಎಂದು ಹೇಳಲಾಗಿದೆ. ವಿದ್ಯಾರ್ಥಿ ಭಾರ್ಗವ ಎಂಬುವವನು ಸೆಕ್ಯೂರಿಟಿ ಕಾರ್ಡ್ ಜೈ ಕಿಸಾನ್ ರಾಯ್ ರನ್ನು ಚಾಕುವಿನಿಂದ ಇರಿದು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿ ಭಾರ್ಗವ ಮದ್ಯ ಸೇವಿಸಿ ಕಾಲೇಜಿಗೆ ಬಂದಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಿಡದಿದ್ದಕ್ಕೆ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಅಮೃತ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. : , ,