ದೇಶದಲ್ಲಿ ಒಂದೇ ದಿನ 2.58 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ. ನವದೆಹಲಿ,ಜನವರಿ,17,2022(..):ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾಗುವ ಕೋವಿಡ್ ಪ್ರಕರಣ ಸಂಖ್ಯೆ ಕೊಂಚ ಕಡಿಮೆಯಾಗಿದ್ದು, 2.58 ಲಕ್ಷ ಮಂದಿಗೆ ಹೊಸ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,58,098 ಹೊಸ ಕೊವಿಡ್ 19 ಕೇಸ್​ಗಳು ದಾಖಲಾಗಿವೆ. ಹಾಗೆಯೇ ಇದೇ ಅವಧಿಯಲ್ಲಿ 385 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.19.65ರಷ್ಟಿದೆ. ಇನ್ನು ಒಂದು ದಿನದಲ್ಲಿ 1,51,740 ಮಂದಿ ಚೇತರಿಸಿಕೊಂಡಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 16,56,341ಕ್ಕೆ ತಲುಪಿದೆ. ಒಟ್ಟಾರೆ ಕೊರೊನಾದಿಂದ ಚೇತರಿಕೆ ಕಂಡವರ ಸಂಖ್ಯೆ 3,52,37,461 ಆಗಿದ್ದು, ಚೇತರಿಕೆ ದರ ಶೇ.94.27 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಒಂದೆಡೆ ಕೊವಿಡ್​ 19 ಕೇಸ್​ನಲ್ಲಿ ಇಳಿಕೆಯಾಗಿದ್ದರೆ, ಇನ್ನೊಂದೆಡೆ ಒಮಿಕ್ರಾನ್​ ಸೋಂಕಿತರ ಸಂಖ್ಯೆ ಹೆಚ್ಚಿದೆ. ಭಾನುವಾರ 7743 ಇದ್ದ ಒಮಿಕ್ರಾನ್​ ಸೋಂಕಿತರ ಸಂಖ್ಯೆ ಇಂದು 8209ಕ್ಕೆ ಏರಿದೆ. ಇದರಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದ್ದು, 1738 ಮಂದಿ ಒಮಿಕ್ರಾನ್ ಸೋಂಕಿತರು ಇದ್ದಾರೆ. ಹಾಗೇ ಎರಡನೇ ಸ್ಥಾನದಲ್ಲಿರುವ ಪಶ್ಚಿಮ ಬಂಗಾಳದಲ್ಲಿ 1672 ಮತ್ತು ಮೂರನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ 1276 ಸೋಂಕಿತರಿದ್ದಾರೆ. : -2.58 - - - … 2.58 24 , 17, 2022 (..): 24 , 2.58 . , 2,58,098 24 385 . 19.65%. 24 , 1,51,740 16,56,341. 3,52,37,461 94.27%. , , . 7743. 8209. 1738 , 1672 , 1276 .: -19/ /