ರಾಜ್ಯದಲ್ಲಿಂದು 28,723 ಕೋವಿಡ್ ಪ್ರಕರಣಗಳು ಪತ್ತೆ. ಬೆಂಗಳೂರು,ಜನವರಿ,14,2022(..):ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ 28,723 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ರಾಜ್ಯದಲ್ಲಿ ಇಂದು 28,723 ಕೋವಿಡ್ ಪ್ರಕರಣಗಳು ದೃಢವಾಗಿವೆ. ಈ ಪೈಕಿ ಬೆಂಗಳೂರಿನಲ್ಲಿ 20,121 ಕೊರೊನಾ ಪಾಸಿಟಿವ್ ಆಗಿದೆ. ಇನ್ನು ರಾಜ್ಯದಲ್ಲಿ ಕೋವಿಡ್ ನಿಂದಾಗಿ ರಾಜ್ಯದಲ್ಲಿ 14 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ 12.98%ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2,21,205 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. 1,41,337 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದ್ದಾರೆ. : 28,723 - – –