ದೇಶದಲ್ಲಿ ಒಂದೇ ದಿನ 2.68 ಲಕ್ಷ ಕೋವಿಡ್ ಕೇಸ್ ಗಳು ಪತ್ತೆ. ನವದೆಹಲಿ,ಜನವರಿ,15,2022(..)ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,68,833 ಕೊರೋನಾ ವೈರಸ್ ಪ್ರಕರಣಗಳು ದೃಢವಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,68,50,962ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 402 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,752ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,17,820ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,22,684 ಮಂದಿ ಗುಣಮುಖರಾಗಿದ್ದು, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 3,49,47,390ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ವೇಳೆಯೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ. : 2.68 - – – .