ಜ.31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ: ಫೆ.1 ರಂದು ಬಜೆಟ್ ಮಂಡನೆ. ನವದೆಹಲಿ,ಜನವರಿ,14,2022(..):ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದ್ದು ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಈ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ಜನವರಿ 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಅವರು ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಾರ್ಚ್ 14ರಿಂದ ಬಜೆಟ್ ಅಧಿವೇಶನದ 2ನೇ ಭಾಗ ನಡೆಯಲಿದ್ದು, ಏಪ್ರಿಲ್ 8ರಂದು ಸಂಸತ್ ಬಜೆಟ್ ಅಧಿವೇಶನ ಅಂತ್ಯವಾಗಲಿದೆ. : – – 31