ತಕ್ಷಣವೇ ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಸೂಚನೆ. ಬೆಂಗಳೂರು,ಜನವರಿ,13,2022(..):ತಕ್ಷಣವೇ ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಸೂಚನೆ ನೀಡಿದೆ ಎನ್ನಲಾಗಿದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಈಗಾಗಲೇ ರಾಜ್ಯ ಸರ್ಕಾರ ಪಾದಯಾತ್ರೆ ನಡೆಸದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಮೇಕೆದಾಟು ಪಾದಯಾತ್ರೆ ನಿಲ್ಲಿಸಬೇಕು ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ರಣದೀಪ್ ಸುರ್ಜೇವಲಾ ಮೂಲಕ ಎಐಸಿಸಿ ಸಂದೇಶ ರವಾನಿಸಿದ್ದು, ಪಕ್ಷಕ್ಕೆ ಮುಖಭಂಗ ತಪ್ಪಿಸಲು ತಕ್ಷಣ ಪಾದಯಾತ್ರೆ ನಿಲ್ಲಿಸಿ ಸೂಚಿಸಿದೆ ಎನ್ನಲಾಗಿದೆ. : - - – -