ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ವೈದ್ಯ ಪ್ರಾಣಾಪಾಯದಿಂದ ಪಾರು. ಮೈಸೂರು,ಜನವರಿ,11,2022(..):ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ ವೈದ್ಯರೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಗನ್ ಹೌಸ್ ವೃತ್ತದ ಬಳಿ ಈ ಘಟನೆ ನಡೆದಿದೆ. ಕುವೆಂಪು ನಗರದ ವೈದ್ಯ ಭೂಷಣ್ ಎಂಬುವವರಿಗೆ ಸೇರಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಕೆ.ಆರ್. ಆಸ್ಪತ್ರೆಗೆ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ವೈದ್ಯ ಭೂಷಣ್ ಕಾರಿನಿಂದ ಕೆಳಗಿಳಿದ್ದಾರೆ. ಧಗಧಗನೆ ಹೊತ್ತಿ ಉರಿದ ಕಾರು ಸಂಪೂರ್ಣ ಭಸ್ಮವಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದ್ದು, ಐ20 ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. : – - -