ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೋವಿಡ್ ದೃಢ. ಬೆಂಗಳೂರು,ಜನವರಿ,10,2022(..):ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸ್ವತಃ ನಳೀನ್ ಕುಮಾರ್ ಕಟೀಲ್ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಹಾಗೂ ಕಳೆದ ನಾಲ್ಕೈದು ದಿನಗಳ ಹಿಂದೆ ಸಚಿವ ಆರ್. ಅಶೋಕ್ ಅವರಿಗೆ ಕೋವಿಡ್ ಸೋಂಕು ತಗುಲಿತ್ತು, ರಾಜ್ಯದಲ್ಲಿ ನಿನ್ನೆ 12,000 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 9,020 ಜನರಿಗೆ ಸೋಂಕು ತಗುಲಿದೆ. : - - .