ವೀಕೆಂಡ್ ಕರ್ಫ್ಯೂ: ಇಂದು ರಾತ್ರಿಯಿಂದಲೇ ಮದ್ಯ ಮಾರಾಟ ಬಂದ್. ಬೆಂಗಳೂರು,ಜನವರಿ,7,2022(..):ರಾಜ್ಯದಲ್ಲಿ ಕೊರೋನಾ ಮತ್ತು ಒಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ಮದ್ಯ ಮಾರಾಟ ಬಂದ್ ಆಗಲಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಅಬಕಾರಿ ಸಚಿವ ಕೆ.ಗೋಪಾಲಯ್ಯ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಬಾರ್ ಗಳು ಬಂದ್ ಆಗಲಿವೆ. ಇಂದು ರಾತ್ರಿ 8 ಗಂಟೆಯಿಂದಲೇ ಮದ್ಯಮಾರಾಟ ಬಂದ್ ಆಗಲಿದ್ದು, ಸೋಮವಾರ ಬೆಳಿಗ್ಗೆವರೆಗೂ ಬಾರ್ ತೆರೆಯುವಂತಿಲ್ಲ.ಎರಡು ವಾರಗಳ ಕಾಲ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ರಾಜ್ಯಾದ್ಯಂತ ರಾತ್ರಿ 8 ಗಂಟೆಗೆ ಬಾರ್ ಬಾಗಿಲು ಹಾಕಬೇಕು ಮೊದಲೇ ಸೂಚನೆ ನೀಡಿರುವ ಹಿನ್ನೆಲೆ ಮದ್ಯ ಖರೀದಿಸುವವರಿಗೆ ಸಮಸ್ಯೆಯಾಗಲ್ಲ ಎಂದು ಸಚಿವ ಗೋಪಾಲಯ್ಯ ತಿಳಿಸಿದರು. : -- –- .