ಮದುವೆಯ ಶುಭ ಸುದ್ದಿ ಹಂಚಿಕೊಂಡ ನಟಿ ಶುಭಾ ಪೂಂಜಾ ಬೆಂಗಳೂರು, ಜನವರಿ 06, 2022 (..):ನಟಿ ಶುಭಾ ಪೂಂಜ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಶುಭ ಸುದ್ದಿ ಹಂಚಿಕೊಂಡಿದ್ದಾರೆ. ನಮಸ್ಕಾರಗಳು, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು ಎಂದು ಶುಭಾ ತಿಳಿಸಿದ್ದಾರೆ.