ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿ ಸಾವು. ಮೈಸೂರು,ಜನವರಿ,5,2022(..):ಭೀಕರ ರಸ್ತೆ ಅಪಘಾತದಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಶಾಂತಲಾ ಸಿಗ್ನಲ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಬೆಳಗಾವಿಯ ಘಟಪ್ರಭಾದ ಎಲ್.ಎಚ್. ರಾಹುಲ್ ಮೃತಪಟ್ಟ ವಿದ್ಯಾರ್ಥಿ. ಶಾಂತಲಾ ಸಿಗ್ನಲ್ ದಾಟುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ರಾಹುಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ ಡಿಕ್ಕಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕೆ.ಆರ್. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದನು. : - - – - -