ಪಾದಯಾತ್ರೆಗೆ ಮುಂದಾಗಿರುವ ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ಸಚಿವ ಡಾ.ಕೆ.ಸುಧಾಕರ್. ಬೆಂಗಳೂರು,ಜನವರಿ,4,2022(..):ರಾಜ್ಯದಲ್ಲಿ ಕೊರೋನಾ ಸೋಂಕು ವೇಗವಾಗಿ ಹರಡುತ್ತಿದೆ. ಹೀಗಾಗಿ ಪಾದಯಾತ್ರೆ ವೇಳೆ ಕೊರೋನಾ ಹೆಚ್ಚಾದರೇ ಅವರೇ ಜವಾಬ್ದಾರಿ ಎಂದು ಕಾಂಗ್ರೆಸ್ ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಹಬೇಕು. ಸೋಂಕು ಇಷ್ಟು ವೇಗವಾಗಿ ಹರಡುತ್ತೆ ಅಂತ ಯಾರು ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದಲ್ಲಿ ಕೊರೋನಾ 3ನೇ ಅಲೆ ಶುರವಾಗಿದೆ. ಕಳೆದ ಮೂರ್ನಾಲು ದಿನಗಳಿಂದ ವೇಗವಾಗಿ ಹರಡುವುದನ್ನ ನೋಡಿದ್ದರೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಕೈ ಬಿಡಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್ ಪಾದಯಾತ್ರೆಗೆ ನಮ್ಮ ಅಭ್ಯಂತರ ಏನು ಇಲ್ಲ, ಅಧಿಕಾರ ಇದ್ದಾಗ ಇದೆಲ್ಲ ಮಾಡಲು ಅವರಿಗೆ ನೆನಪು ಆಗಲಿಲ್ಲ, ಈಗ ಚುನಾವಣೆ ಇದೆ ಅಲ್ಲವೇ ಅದಕ್ಕೆ ಇದನ್ನು ಮಾಡ್ತಿದ್ದಾರೆ. ಬೇರೆ ಬೇರೆ ಜಿಲ್ಲೆಗಳಿಂದ ಎಲ್ಲರನ್ನೂ ಕರೆಸಿ ಇಲ್ಲಿ ಹೋರಾಟಕ್ಕೆ ಮುಂದಾಗ್ತಿದ್ದಾರೆ. ಆದರೆ ಇದರಿಂದ ಕೊರೊನಾ ಹೆಚ್ಚಳ ಆದರೆ, ಅವರೇ ಅದರ ಜವಾಬ್ದಾರಿ ಹೊರಬೇಕು ಎಂದು ತಿಳೀಸಿದರು. : - – - –