ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ- ಸಿಎಂ ಬೊಮ್ಮಾಯಿ ಹೇಳಿಕೆ. ಕಲ್ಬುರ್ಗಿ,ಜನವರಿ,4,2022(..):ರಾಜ್ಯದಲ್ಲಿ ಕೊರೋನಾ ಒಮಿಕ್ರಾನ್ ಹೆಚ್ಚಳವಾಗುತ್ತಿದ್ದು, ಸೋಂಕು ತಡೆ ಸಂಬಂಧ ಇಂದು ತಜ್ಞರ ಸಭೆ ಇದೆ. ಸಭೆಯಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲ್ಬುರ್ಗಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ನಿಯಮ ಪಾಲಿಸುವ ಮೂಲಕ ಜನರು ಸಹಕರಿಸಬೇಕು. ಜನರು ಸಹಕರಿಸಿದರೇ ಮಾತ್ರ ಕೋವಿಡ್ ನಿಯಂತ್ರಣ ಸಾಧ್ಯ. ತಜ್ಞರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಔಷಧ ಸೇರಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು. ಶಾಲಾ ಕಾಲೇಜು ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ತಜ್ಞರ ಸಲಹೆ ಬಳಿಕ ಶಾಲೆ ಬಂದ್ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಕೊರೋನಾ ತಡೆಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಕಟ್ಟಚ್ಚರ ವಹಿಸಲಾಗಿದೆ. ಗಡಿಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು. : -- – - - --- . … ‘ , - ’ ’: , 4, 2022 (..): “ , -,” . , - . “ . , . , , , .,” . , . , . “ , ,” .: -19 / / / /