ಕಲ್ಲು ಬಂಡೆಗಳನ್ನು ನುಂಗಿ ನೀರು ಕುಡಿದ ʼಡಿಸೈನ್ ವೀರರಿಗೆʼ ನಮ್ಮ ನೆಲ, ಜಲ ಈಗ ನೆನಪಾಗಿದೆ-ಡಿಕೆ ಬ್ರದರ್ಸ್ ವಿರುದ್ಧ ಹೆಚ್.ಡಿಕೆ ವಾಗ್ದಾಳಿ. ಬೆಂಗಳೂರು,ಜನವರಿ,4,2022(..):ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಚಿವ ಅಶ್ವಥ್ ನಾರಾಯಣ್ ಮತ್ತು ಸಂಸದ ಡಿ.ಕೆ ಸುರೇಶ್ ನಡುವೆ ನಿನ್ನೆ ಸಿಎಂ ಸಮ್ಮುಖದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಬ್ರದರ್ಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ ಸುರೇಶ್ ಅವರನ್ನ ಕುಟುಕಿರುವ ಹೆಚ್.ಡಿ ಕುಮಾರಸ್ವಾಮಿ, ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ.. ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ಟಾಂಗ್ ನೀಡಿದ್ದಾರೆ. ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ. ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ. ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಡಿ.ಕೆ ಬ್ರದರ್ಸ್ ಗೆ ಟಾಂಗ್ ನೀಡಿದ್ದಾರೆ. … .. , 4, 2022 (..): .. .. .. , , , . , , “ ( ) . .”“, . . . , ’ ? ,” .: .. / .. / .. / : - - - -