ಕೊರೋನಾ ಹೆಚ್ಚಳ ಹಿನ್ನೆಲೆ: ದೆಹಲಿಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ. ನವದೆಹಲಿ,ಜನವರಿ,4,2022(..):ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಕುರಿತು ದೆಹಲಿ ಸರ್ಕಾರ ಆದೇಶ ಹೊರಡಿಸಿದ್ದು ವೀಕೆಂಡ್ ಶನಿವಾರ ಮತ್ತು ಭಾನುವಾರ ಫುಲ್ ಲಾಕ್ ಆಗಲಿದೆ. ಹಾಗೆಯೇ ದೆಹಲಿಯಲ್ಲಿ 50:50 ನಿಯಮ ಜಾರಿ ಮಾಡಲಾಗಿದ್ದು, ವಾಣಿಜ್ಯ ಚಟುವಟಿಕೆಗಳು ಹಾಗೂ ಸರ್ಕಾರಿ ಕಚೇರಿಗ:ಳಿಗೂ ಶೇ.50% ನಿಯಮ ಅನ್ವಯವಾಗಲಿದೆ. ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್ ಗೆ ಅವಕಾಶ ನೀಡಲಾಗಿದೆ. ಶನಿವಾರ ಭಾನುವಾರ ವೀಕೆಂಡ್ ಲಾಕ್ ಡೌನ್ ಹಿನ್ನೆಲೆ ಪಬ್ ಬಾರ್ ರೆಸ್ಟೋರೆಂಟ್ ಎಲ್ಲವೂ ಬಂದ್ ಆಗಲಿದ್ದು ಈ ಮೂಲಕ ಕೊರೋನಾ ತಡೆಗಾಗಿ ದೆಹಲಿ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದೆ. : --- –- – .