9 ತಿಂಗಳ ಬಳಿಕ ಅತಿಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆ. ನವದೆಹಲಿ,ಜನವರಿ,1,2022(..):ದೇಶದಲ್ಲಿ ಒಮಿಕ್ರಾನ್ ಪತ್ತೆಯಾದ ಬಳಿಕ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು ಈ ನಡುವೆ ಒಂದೇ ದಿನದಲ್ಲಿ 22,775 ಮಂದಿಗೆ ಕೋವಿಡ್ ದೃಢವಾಗಿದೆ. 9 ತಿಂಗಳ ಬಳಿಕ ಅತಿಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೊರೋನಾದಿಂದ 406 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು 1,04, 781 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಒಮಿಕ್ರಾನ್ ಪತ್ತೆಯಾದ ಬಳಿಕ ಕೊರೋನಾ ಪ್ರಕರಣಗಳು ಹೆಚ್ಚಾಗಿದೆ. ದೇಶದಲ್ಲಿ 98.32 ರಷ್ಟು ಜನ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೆಯೇ ದೇಶದಲ್ಲಿ ಒಟ್ಟು 1431 ಮಂದಿಗೆ ಒಮಿಕ್ರಾನ್ ಸೋಂಕು ತಗುಲಿದೆ. : - –- –- 9 .