ಕಾಂಗ್ರೆಸ್ ಪಾದಯಾತ್ರೆ: ಇಬ್ಬರು ಬಿಟ್ಟಿ ಪ್ರಚಾರಕ್ಕಾಗಿ ಮಾತನಾಡುತ್ತಿದ್ದಾರೆ ಎಂದ ಸಚಿವ ನಾರಾಯಣಗೌಡ. ಬೆಂಗಳೂರು,ಡಿಸೆಂಬರ್,31,2021(..):ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಮಾತಿನ ಸಮರದ ಬಗ್ಗೆ ಸಚಿವ ನಾರಾಯಣಗೌಡ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ನಾರಾಯಣಗೌಡ, ಮೇಕೆದಾಟು ಯೋಜನೆ ಪಾದಯಾತ್ರೆ ವಿಚಾರದಲ್ಲಿ ಹೆಚ್.ಡಿ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ಬಿಟ್ಟಿ ಪ್ರಚಾರಕ್ಕಾಗಿ ಮಾತನಾಡುತ್ತಿದ್ದಾರೆ. ಪಾದಯಾತ್ರೆ ಮೂಲಕ ಹೆಸರು ಮಾಡಲು ಹೊರಟಿದ್ದಾರೆ. ಪಾದಯಾತ್ರೆಯಿಂದ ನಮಗೇನು ಭಯ ಇಲ್ಲ ಎಂದು ಟೀಕಿಸಿದ್ದಾರೆ. : - - – -