ದೇಶದಲ್ಲಿ ಕೊರೋನಾ ಪ್ರಕರಣಗಳ ಮತ್ತೆ ಏರಿಕೆ. ನವದೆಹಲಿ,ಡಿಸೆಂಬರ್,31,2021(..):ಹೊಸ ವರ್ಷದ ಸಂಭ್ರಮಾಚರಣೆಗೆ ಒಂದು ದಿನ ಬಾಕಿ ಇರುವ ಮುನ್ನ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹೌದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 16,764 ಜನರಲ್ಲಿ ಹೊಸದಾಗಿ ಕೋವಿಡ್ ಪ್ರಕರಣ ದೃಢವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಕಳೆದ 24 ಗಂಟೆಯಲ್ಲಿ 220 ಜನರು ಕೊರೋನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,81,080 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 91361 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7585 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34266363 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ದೇಶದಲ್ಲಿ 12,50,837 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 66,65,290 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,44,54,16,714 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 1270ಕ್ಕೆ ಏರಿಕೆ. ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 1270ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 450, ದೆಹಲಿಯಲ್ಲಿ 320, ಗುಜರಾತ್ ನಲ್ಲಿ 97 ತೆಲಂಗಾಣ 62 ಆಂಧ್ರ 16, ಹರಿಯಾಣ ಒಡಿಶಾ ತಲಾ 14 ಪ. ಬಂಗಾಳ 11 ಪ್ರಕರಣಗಳಿವೆ. : - - – . … . , 31, 2021 (..): . 16,764 24 . , 220 481080. 91361 7585 24 . 34266363. 1250837 24 6665290. 1,44,54,16,714. 1270. 450, : (320), (97), (62) (16), (14 ), (11).: -19/ / / /