ಸಿಎಂ, ಡಿಸಿಎಂ ಹುದ್ದೆ ಕೇಳೋಕೆ ಎಲ್ಲರಿಗೂ ಹಕ್ಕಿದೆ- ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ,ಜುಲೈ,1,2024 (..):ರಾಜ್ಯದಲ್ಲಿ ಸಿಎಂ ಬದಲಾವಣೆ ಮತ್ತು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಚರ್ಚೆಯಾಗುತ್ತಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ, ಡಿಸಿಎಂ ಹುದ್ದೆ ಕೇಳೋದು ಎಲ್ಲರಿಗೂ ಹಕ್ಕಿದೆ. ಆದರೆ ಎಲ್ಲಿ ಕೇಳಬೇಕು ಅಲ್ಲಿ ಕೇಳಬೇಕು ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ, ಡಿಸಿಎಂ ಹುದ್ದೆ ಕೇಳುವ ಹಕ್ಕು ಎಲ್ಲರಿಗೂ ಇದೆ. ಆದ್ರೆ ಎಲ್ಲಿ ಕೇಳಬೇಕು, ಅಲ್ಲೇ ಕೇಳಬೇಕು. ಮಾಧ್ಯಮಗಳ ಮುಂದೆ ಕೇಳಿದ್ರೆ ಆಗಲ್ಲ ಎಂದರು. ಸಿಎಂ, ಡಿಸಿಎಂ ಹುದ್ದೆ ಕುರಿತು ಬೀದಿಯಲ್ಲಿ ಚರ್ಚೆ ಮಾಡೋದು ಸರಿಯಲ್ಲ ಈ ರೀತಿಯಲ್ಲಿ ನಾವು ಮಾತನಾಡಿದರೇ ನಮ್ಮ ಕಾರ್ಯಕರ್ತರಿಗೆ ಕೆಟ್ಟ ಸಂದೇಶ ಹೋಗುತ್ತದೆ. ಎಲ್ಲವನ್ನೂ ಹೈಕಮಾಂಡ್ ತೀರ್ಮಾನಿಸುತ್ತೆ ಎಂದರು. ಇನ್ನು ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ನಾನು ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಇಲ್ಲವೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು. : , , , ,