ದೇಶದಲ್ಲಿ ಮತ್ತೆ ಕೊರೋನಾ ಏರಿಕೆ: ಒಂದೇ ದಿನ 13,154 ಕೋವಿಡ್ ಪ್ರಕರಣಗಳು ಪತ್ತೆ. ನವದೆಹಲಿ, ಡಿಸೆಂಬರ್ 30,2021(..): ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದೊಂದು ತಿಂಗಳಿನಲ್ಲೇ ಮೊದಲ ಬಾರಿಗೆ ಒಂದೇ ದಿನದಲ್ಲಿ 10,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಹೌದು, ಕಳೆದ 24 ಗಂಟೆಗಳಲ್ಲಿ 13,154 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ 268 ಕೊರೋನಾದಿಂದ ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 7,486 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 3,42,58,778 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 4,80,860 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ 961ಕ್ಕೆ ಏರಿಕೆಯಾಗಿದೆ. ದೆಹಲಿ 263, ಮಹಾರಾಷ್ಟ್ರ 252 ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿದ್ದು, ಅತಿಹೆಚ್ಚು ಪ್ರಕರಣಗಳನ್ನು ವರದಿ ಮಾಡಿರುವ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. : - - – -13,154 – . … : 13,154 24 , 30, 2021 (..): . 10,000 .13,154 24 , 268 . 7,486 , . -19 3,42,58,778, 4,80,860. 961 . (263), (252).: -19/ /