ಗರುಡ ಮಾಲ್ ಗೆ ದಂಡ ವಿಧಿಸಿದ ಬಿಬಿಎಂಪಿ. ಬೆಂಗಳೂರು,ಡಿಸೆಂಬರ್,27,2021(..):ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಬೆಂಗಳೂರಿನ ಗರುಡ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಎರಡು ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೂ ಗರುಡ ಮಾಲ್ ಒಳಗೆ ಪ್ರವೇಶಕ್ಕೆ ಅವಕಾಶ ನೀಡುತಿದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು 20 ಸಾವಿರ ರೂ. ದಂಡ ವಿಧಿಸಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಸೋಂಕು, ಕೋವಿಡ್ 3ನೇ ಅಲೆ ಭೀತಿ ಹಿನ್ನೆಲೆ ಮಾಲ್ ಸಿನಿಮಾ ಥಿಯೇಡರ್ ಹಾಗೂ ಶಾಲಾಕಾಲೇಜುಗಳಲ್ಲಿ ಶಿಕ್ಷಕರಿಗೆ ಎರಡು ಡೋಸ್ ಲಸಿಕೆ ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಗರುಡ ಮಾಲ್ ಗೆ ಬಿಬಿಎಂಪಿ ದಂಡ ವಿಧಿಸಿ ನೋಟೀಸ್ ನೀಡಿದೆ ಎನ್ನಲಾಗಿದೆ. : - - - -