ಜನರ ಆರೋಗ್ಯ ದೃಷ್ಠಿಯಿಂದ ನೈಟ್ ಕರ್ಫ್ಯೂ ಜಾರಿ-ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಡಿಸೆಂಬರ್,27,2021(..):ಜನರ ಆರೋಗ್ಯದೃಷ್ಠಿಯಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಉದ್ಯೋಗಕ್ಕೆ ನಷ್ಟವಾಗುತ್ತೆ ಅಂತಾ ಗೊತ್ತು. ವ್ಯಾಪಾರ ವಹಿವಾಟು ನಡೆಯಬೇಕು ಎಂಬುದು ನಮ್ಮ ಉದ್ದೇಶ. ಈಗ ಮತ್ತೆ ಆರ್ಥಿಕ ಚೇತರಿಕೆ ಕಾಣುತ್ತಿದೆ. ಆದರೆ ಆರೋಗ್ಯದ ದೃಷ್ಠಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಕೊರೋನಾ ನಿಯಮ ಪಾಲಿಸಿ ವ್ಯಾಪಾರ ಮಾಡಿಕೊಳ್ಳಿರಿ ಎಂದು ಸಿಎಂ ಬೊಮ್ಮಾಯಿ ಸಲಹೆ ನೀಡಿದರು. ಒಮಿಕ್ರಾನ್ ಸೋಂಕು ಹರಡುವ ಭೀತಿ ಹಿನ್ನೆಲೆ ಡಿಸೆಂಬರ್ 28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. : - – ’ –- -- … : , 27, 2021 (..): . . , , “ . . , . . .” 28, 10.00 5.00 .: // -19 /