ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಸೇನಾಪಡೆ ಕಾರ್ಯಾಚರಣೆಯಲ್ಲಿ ಉಗ್ರನ ಹತ್ಯೆ ಬೆಂಗಳೂರು, ಡಿಸೆಂಬರ್ 26, 2021 (..):ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿ ಉಗ್ರನೊಬ್ಬನನ್ನು ಹತ್ಯೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಯೋಧರ ಗುಂಡಿಗೆ ಉಗ್ರ ಬಲಿಯಾಗಿದ್ದಾನೆ. ಅನಂತ್ ನಾಗ್ ಜಿಲ್ಲೆಯ ಶ್ರೀಗುಫ್ವಾರ ಎಂಬ ಪ್ರದೇಶದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಉಗ್ರನನ್ನು ಕಡಿಪೋರಾ ಪ್ರದೇಶದ ನಿವಾಸಿ ಫಹೀಂ ಭಟ್ ಎಂದು ಗುರುತಿಸಲಾಗಿದೆ.