ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ: ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹುಬ್ಬಳ್ಳಿ,ಡಿಸೆಂಬರ್,25,2021(..):ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತು ಸುದ್ಧಿಗಳು ಹರಡಿದ್ದು ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಯಾವುದೇ ಊಹಾಪೂಹಗಳಿಗೆ ಕಿವಿಕೊಡಬೇಡಿ ಎಂದಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ಸಿಂ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಸುದ್ದಿ ಹರಡೋದು ತಪ್ಪು. ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು. ಸಂಸತ್ ಅಧೀವೇಶನದ ವೇಳೆ ಕಾಂಗ್ರೆಸ್ ಗದ್ಧಲ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ ಏನೇ ಮಾಡಿದರೂ ಕಾಂಗ್ರೆಸ್ ವಿರೋಧಿಸುತ್ತೆ. ಅಂಬೇಡ್ಕರ್ ಸಂವಿಧಾನವನ್ನೂ ಬಹಿಷ್ಕರಿಸಿದರು. ಅಂಬೇಡ್ಕರ್ ಗೆ ಅಪಮಾನ ಮಾಡಿದರು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. : -- – - -