ಬೆಂಗಳೂರಿನಲ್ಲಿ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟ. ಬೆಂಗಳೂರು,ಡಿಸೆಂಬರ್, 24,2021(..):ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಸೀದಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹೊತ್ತಿ ಉರಿದಿದೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಅಡುಗೆ ಅನಿಲ ಸೋರಿಕೆಯಿಂದಾಗಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ಜನರು ನಮಾಜ್ ಗೆ ಬಂದಿದ್ದರು. ಈ ವೇಳೆ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟವಾಗಿದೆ. ಸಿಲಿಂಡರ್ ಸ್ಪೋಟಗೊಳ್ಳುತ್ತಿದ್ದಂತೆ ಜನರು ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - – -