ಎರಡು ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ. ದಾವಣಗೆರೆ,ಡಿಸೆಂಬರ್,24,2021(..):ಎರಡು ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಹೊನ್ನಾಳಿ ತಾಲ್ಲೂಕಿನ ತಕ್ಕನಹಳ್ಳಿ ಬಳಿ ಈ ಘಟನೆ ನಡೆದಿದೆ. ಹೊನ್ನಾಳಿಯ ಮಹೇಶಪ್ಪ ಸಂಜು ಪ್ರಶಾಂತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –- - - .