ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಸರ್ಕಾರಿ ಬಸ್: 10 ಮಂದಿಗೆ ಗಾಯ ಮಂಡ್ಯ, ಜೂನ್, 29,2024 (..):ಬೆಂಗಳೂರಿನಿಂದ- ಮೈಸೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿ 10 ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ರಾಗಿಮುದ್ದನಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರ ಬಸ್ ಡಿವೈಡರ್ ​ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್‌ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ. ಘಟನೆಯಲ್ಲಿ ಬಸ್‌ ನಲ್ಲಿದ್ದ 10 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿತವಾಗಿದೆ. ಗಾಯಾಳುಗಳಿಗೆ ಮಂಡ್ಯ,‌ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಲ್ಲಿ 30 ಜನ ಇದ್ದರು ಎನ್ನಲಾಗಿದೆ. ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್​​ಗಳು ಜಖಂಗೊಂಡಿದೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : , , , 10 ,