ಅಧಿವೇಶನ ಸಂದರ್ಭದಲ್ಲಿ ಗಲಭೆ: ಮಾಜಿ ಸಿಎಂ ಬಿಎಸ್ವೈ ಹೇಳಿದ್ದೇನು…? ಬೆಂಗಳೂರು, ಡಿಸೆಂಬರ್ 19, 2021 (..):ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರಿಂದ ಗಲಭೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೂರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮರ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ. ನಾಳೆ ವಿಧಾನಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ. ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮುಂದೆ ಈ ರೀತಿ ಘಟನೆಗಳು ಮರುಕಳಿಸದಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಅಪರಾಧಿಗಳು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.