ಸಂಗೊಳ್ಳಿ ರಾಯಣ್ಣ ಮೂರ್ತಿ ಹಾನಿಮಾಡಿದವರ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಆಗ್ರಹ ಮೈಸೂರು,ಡಿಸೆಂಬರ್,18,2021(..):ಬೆಳಗಾವಿಯ ಅನಗೊಳದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ಪ್ರತಿಮೆಗೆ ಹಾನಿ ಮಾಡಿರುವುದು ಅತ್ಯಂತ ಖಂಡನೀಯವಾಗಿದ್ದು, ಕೂಡಲೇ ದೇಶದ್ರೋಹಿಗಳನ್ನು ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಒತ್ತಾಯಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರು ದೇಶದ ಅಪ್ರತಿಮ ದೇಶಭಕ್ತ. ಸ್ವಾತಂತ್ರ್ಯ ಸೇನಾನಿ. ಬ್ರಿಟಿಷರ ವಿರುದ್ಧ ಕೆಚ್ಚದಯ ಹೋರಾಟ ಮಾಡಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ನಾಯಕನ ಮೂರ್ತಿಯನ್ನು ಹಾನಿ ಮಾಡಿ ಅಪಮಾನಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಸ್ವಾತಂತ್ರ್ಯ ಸೇನಾನಿ ರಾಯಣ್ಣನ ಬಗ್ಗೆ ತಿಳಿಯದ ಗೋಮುಖ ವ್ಯಾಘ್ರ ಮನಸ್ಸಿನವರು ಇಂತಹ ಕೆಲಸ ಮಾಡಲು ಕಾರಣವಾಗಿದೆ. ರಾಜ್ಯಸರ್ಕಾರ ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ರಾಯಣ್ಣನ ಪ್ರತಿಮೆಯನ್ನು ದುರಸ್ಥಿಪಡಿಸಿ ರಕ್ಷಣೆ ಮಾಡಬೇಕು ಎಂದು ಎಚ್.ಎ ವೆಂಕಟೇಶ್ ಆಗ್ರಹಿಸಿದ್ದಾರೆ. : -- . - – - – – –