ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ವಿಚಾರ: ಎಂಇಎಸ್ ಪುಂಡರನ್ನ ಬಂಧಿಸಿ ಜೈಲಿಗಟ್ಟುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ. ಬೆಂಗಳೂರು,ಡಿಸೆಂಬರ್,18,2021(. .):ಬೆಳಗಾವಿಯ ಅನಗೋಳದ ಕನಕದಾಸ ಕಾಲೊನಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ಪುಂಡರು ಭಗ್ನಗೊಳಿಸಿದ್ದು ಎಂಇಎಸ್ ಪುಂಡರ ಈ ಹೀನಕೃತ್ಯವನ್ನ ವಿಪಕ್ಷ ನಾಯಕ ಸಿದ್ಧರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಸಿಎಂ ಬೊಮ್ಮಾಯಿ ಅವರು ಈ ಗೂಂಡಾಗಳನ್ನ ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರೇ ಇದಕ್ಕೆಲ್ಲಾ ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡುತ್ತೇನೆ ಎಂದು ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. : – - - - - –