ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ. ಬೆಳಗಾವಿ, ಡಿಸೆಂಬರ್ 17, 2021 (..): ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ. ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಮೀಸಲಾತಿ ನೀಡುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಪುನಾರಾವರ್ತಿಸಿದ್ದಾರೆ.