ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ಹಲವು ವಿಚಾರಗಳ ಬಗ್ಗೆ ಚರ್ಚೆ. ಬೆಂಗಳೂರು,ಡಿಸೆಂಬರ್,15,2021(..):ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯುತ್ತಿದ್ದು ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ವಿರೋಧ ಮಸೂದೆ ಮಂಡನೆ ವೇಳೆ ಹೋರಾಟದ ಬಗ್ಗೆ ಚರ್ಚೆ 40 ಪರ್ಸೆಂಟ್ ಕಮಿಷನ್, ಬಿಟ್ ಕಾಯಿನ್ ಧಂಧೆ ವಿಚಾರದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಅಧಿವೇಶನದಲ್ಲಿ ಆಡಳಿತ ಪಕ್ಷದ ವಿರುದ್ಧ ತಿರುಗಿ ಬೀಳುವ ಕುರಿತು ಚರ್ಚಿಸಲಾಗುತ್ತಿದೆ. ಇನ್ನು ಶಾಸಕಾಂಗ ಸಭೆಯಲ್ಲಿ ನೂತನ ಎಂಎಲ್ ಸಿಗಳಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದರು. : - - - - -.